ರಾಹುಲ್, ಪ್ರಿಯಾಂಕ ಪೊಲೀಸ್ ವಶ

October 2, 2020

ನವದೆಹಲಿ ಅ.2 : ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಹತ್ರಾಸ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಕಾರನ್ನು ಗ್ರೇಟರ್ ನೋಯ್ಡಾದಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದರು. ಬಳಿಕ ಸಂತ್ರಸ್ಥ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕಾಲ್ನಡಿಯಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, “ಕಳೆದ ವರ್ಷ ಇದೇ ಸಮಯದಲ್ಲಿ ನಾವು ಉನ್ನಾವೊ ಮಗಳಿಗಾಗಿ ಹೋರಾಡುತ್ತಿದ್ದೆವು. ಒಂದು ವರ್ಷದಲ್ಲಿ ಯುಪಿಯ ಪರಿಸ್ಥಿತಿ ಬದಲಾಗಿಲ್ಲ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಿಳೆಯರ ಸುರಕ್ಷತೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

error: Content is protected !!