ಗಾಂಧಿ ಜಯಂತಿ ಪ್ರಯುಕ್ತ ಕುಶಾಲನಗರದಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

02/10/2020

ಮಡಿಕೇರಿ ಅ.2: ಗಾಂಧಿ ಜಯಂತಿ ಪ್ರಯುಕ್ತ ಡಾ.ಬಿ.ಆರ್. ಅಂಬೇಡ್ಕರ್ ಜನಪರ ವೇದಿಕೆ, ವತಿಯಿಂದ ಕುಶಾಲನಗರ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಸಸ್ಯಾಹಾರಿ ಊಟ ಮತ್ತು ಹಣ್ಣುಹಂಪಲುಗಳನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಜೋಸೆಫ್ ವಿಕ್ಟರ್ ಸೋನ್ಸ್ ಮಾತನಾಡಿ ಗಾಂಧಿ ಜಯಂತಿಯ ಹುಟ್ಟುಹಬ್ಬದ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆಯು ಕುಶಾಲನಗರದ ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ಕೊಡುವುದರ ಮೂಲಕ ಉತ್ತಮವಾದ ಕೆಲಸಕ್ಕೆ ಮುಂದಾಗಿದ್ದಾರೆ. ಇದೇ ರೀತಿ ಇನ್ನು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಲಹೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಜಯಪ್ರಕಾಶ್, ಕೊಡಗು ಮಹಿಳಾ ಘಟಕದ ಅಧ್ಯಕ್ಷರಾದ ಫಾತಿಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝೈನುಲ್ ಆಬಿದ್. ಕೆ.ಎ,ಮಹದೇವ್, ಗೋಪಾಲ್, ಶಹನಾಝ್ ಬೇಗ್,ಕಲ್ಪನಾ,ಇನ್ನಿತರರು ಹಾಜರಿದ್ದರು.