ಕೊಡಗು ಜಿಲ್ಲಾಡಳಿತದಿಂದ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಮಡಿಕೇರಿ ಅ.2 : ಜಿಲ್ಲಾಡಳಿತ, ನಗರಸಭೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ವೋದಯ ಸಮಿತಿ ಜಂಟಿ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.
ಜಿ.ಪಂ ಸಿ.ಇ.ಒ ಭನ್ವರ್ ಸಿಂಗ್ ಮೀನಾ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಪೌರಾಯುಕ್ತರಾದ ಎಸ್.ವಿ. ರಾಮದಾಸ್, ತಹಶೀಲ್ದಾರ್ ಮಹೇಶ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನಿರ್ ಅಹಮ್ಮದ್, ಕಾರ್ಯದರ್ಶಿ ಕೆ.ಟಿ.ಬೇಬಿಮ್ಯಾಥ್ಯು, ಖಜಾಂಜಿ ಕೋಡಿ ಚಂದ್ರಶೇಖರ್ ಅವರು ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾದಿಕಾರಿ ಡಾ.ಕೆ.ಮೋಹನ್, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ಸರ್ವೋದಯ ಸಮಿತಿ ಸದಸ್ಯರು ಇತರರು ಹಾಜರಿದ್ದರು.