ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತ : ಸೋಮವಾರಪೇಟೆ ಇಂದಿರಾ ಗಾಂಧಿ ಅಭಿಮಾನಿಗಳ ಸಂಘ ಅಸಮಾಧಾನ

02/10/2020

ಸೋಮವಾರಪೇಟೆ ಅ.2 : ಸೋಮವಾರಪೇಟೆ ಪಟ್ಟಣದ ಮಾರುಕಟ್ಟೆ ಭಾಗದಲ್ಲಿ ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಬೇಕೆಂದು ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದು, ಪ.ಪಂ.ಗೆÉ ಮನವಿ ಸಲ್ಲಿಸಿದ್ದಾರೆ.
ಕಳೆದ 1 ವರ್ಷಗಳಿಂದ ಇಂದಿರಾ ಕ್ಯಾಂಟೀನ್ ಕಾಮಗಾರಿ ಸ್ಥಗಿತಗೊಂಡಿದ್ದು, ಅನೇಕ ಬಾರಿ ಮನವಿ ಮಾಡಿದ್ದರೂ ಯಾವದೇ ಪ್ರಯೋಜನವಾಗಿಲ್ಲ. ತಕ್ಷಣ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಪ.ಪಂ. ಎದುರು ಪ್ರತಿಭಟನೆ ನಡೆಸುವದಾಗಿ ಪದಾಧಿಕಾರಿಗಳು ಎಚ್ಚರಿಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜ್, ಕಾರ್ಯದರ್ಶಿ ರಾಜಪ್ಪ, ಆನಂದ್ ಸೇರಿದಂತೆ ಇತರರು ಇದ್ದರು.