ತಾಕೇರಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ

October 2, 2020

ಸೋಮವಾರಪೇಟೆ ಅ.2 : ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ, ಕಿರಗಂದೂರು, ತಾಕೇರಿ ಬಿ., ಕೋವರ್‍ಕೊಲ್ಲಿ ಅಂಗನವಾಡಿ ಕೇಂದ್ರ ವ್ಯಾಪ್ತಿಯನ್ನು ಒಳಗೊಂಡಂತೆ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಮಹಿಳಾ ಸಮಾಜದ ಅಧ್ಯಕ್ಷೆ ಚಂದ್ರ ಬಿದ್ದಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ನಾಗವೇಣಿ, ಕಾವೇರಿ, ಚಂದ್ರಿಕಾ, ದಾಕ್ಷಾಯಿಣಿ, ಗ್ರಾ.ಪಂ. ಕಾರ್ಯದರ್ಶಿ ಶಂಕರ್, ಆರೋಗ್ಯ ಕಾರ್ಯಕರ್ತೆಯರು ಇದ್ದರು.