ಟ್ರ್ಯಾಕ್ಟರ್ ರ‍್ಯಾಲಿಗೆ ಅ.4 ರಂದು ಚಾಲನೆ

03/10/2020

ಚಂಡೀಗಢ ಅ.3 : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ನೂತನ ಕೃಷಿ ಮಸೂದೆ ವಿರುದ್ಧದ ಹೋರಾಟದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದು, ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಅ.4 ರಿಂದ 6 ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಗಳನ್ನು ನಡೆಸಲಿದ್ದಾರೆ.
ಇದಕ್ಕೂ ಮೊದಲು ಅಕ್ಟೋಬರ್ 3 ರಿಂದ 5ರ ವರೆಗೆ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ರಾಹುಲ್ ಗಾಂಧಿ ನಿರ್ಧರಿಸಿದ್ದರು ಎಂದು ಪಕ್ಷ ಹೇಳಿದೆ.
“ರಾಹುಲ್ ಗಾಂಧಿ ಅವರ ಟ್ರಾಕ್ಟರ್ ರ್ಯಾಲಿ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದ್ದು, ಅ.4, 5, 6ಕ್ಕೆ ಮರು ನಿಗದಿಪಡಿಸಲಾಗಿದೆ. ಉಳಿದ ವಿವರ ಮೊದಲಿನಂತೆಯೇ ಇದೆ” ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಲ್ ಟ್ವೀಟ್ ಮಾಡಿದ್ದಾರೆ.