ವಿದ್ಯಾರ್ಥಿಗಳ ದಸರಾ ರಜೆ ರದ್ದು

03/10/2020

ಬೆಂಗಳೂರು ಅ. 3 : ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಶಾಲೆಗಳು ತಡವಾಗಿ ಆರಂಭವಾದ ಕಾರಣ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ದಸರಾ ರಜೆಯನ್ನು ರದ್ದು ಪಡಿಸಿದೆ.
ಅ.3 ರಿಂದ ಅ.26 ರವರೆಗೆ ಪ್ರತಿ ವರ್ಷ ಮಕ್ಕಳಿಗೆ ದಸರಾ ರಜೆ ನೀಡಲಾಗುತ್ತಿತ್ತು. ಆದರೆ ಈ ವರ್ಷ ದಸರಾ ರಜೆ ರದ್ದು ಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ಪ್ರಾರಂಭ ಕುರಿತು ಪ್ರಾಥಮಿಕ ಶಾಲೆ, ಪ್ರೌಢಶಾಲೆ ಶಿಕ್ಷಕರ ಸಂಘಟನೆಗಳ ಹಾಗೂ ಪದವಿ ಪೂರ್ವ ಉಪನ್ಯಾಸಕರ ಸಂಘಗಳ ಜಿಲ್ಲಾ ಪ್ರತಿನಿಧಿಗಳೊಂದಿಗೆ ಗುರುವಾರ ವೆಬಿನಾರ್ ಸಂವಾದ ನಡೆಸಿ ಮಾತನಾಡಿದ ಅವರು, ಸರ್ಕಾರಕ್ಕೆ ಈ ನಾಡಿನ ಮಕ್ಕಳ ಹಿತವೇ ಪ್ರಮುಖವಾಗಿದ್ದು, ಮಕ್ಕಳ ಆರೋಗ್ಯಕ್ಕೆ ತೊಂದರೆಯಾಗುವ ಯಾವುದೇ ನಿರ್ಧಾರಗಳನ್ನು ಕೈಗೊಳ್ಳಲಾಗುವುದಿಲ್ಲ ಎಂದರು.
ವಿದ್ಯಾಗಮ, ಯೂ-ಟ್ಯೂಬ್, ಆನ್ ಲೈನ್, ಚಂದನ ಚಾನಲ್ ನ ಸೇತುಬಂಧ ತರಗತಿಗಳು ನಮ್ಮ ಮಕ್ಕಳ ಕಲಿಕೆಯ ನಿರಂತರತೆಗೆ ಮಾತ್ರ ಉಪಯೋಗವಾಗುತ್ತಿವೆ. ಆವು ಪೂರ್ಣ ಪರ್ಯಾಯವೂ ಅಲ್ಲ, ಪೂರಕವೂ ಅಲ್ಲ ಎಂಬುದು ನಮಗೆ ಮನವರಿಕೆಯಾಗಿದೆ. ಶಾಲಾ ತರಗತಿ ಕಲಿಕೆಯಷ್ಟು ಯಾವುದೇ ಕಲಿಕಾ ವಿಧಾನ ಪರಿಣಾಮಕಾರಿಯಲ್ಲ. ಆದರೂ
ಶಾಲಾರಂಭದ ಆಲೋಚನೆ ಸದ್ಯಕ್ಕೆ ನಮ್ಮ ಮುಂದಿಲ್ಲ ಎಂದು ಹೇಳಿದ್ದಾರೆ.