ಕೊಡಗಿನಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 48 ಕ್ಕೆ ಏರಿಕೆ

03/10/2020

ಮಡಿಕೇರಿ ಅ.3 : ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ಪ್ರಕರಣಗಳ ಪ್ರಾಥಮಿಕ/ದ್ವಿತೀಯ ಸಂಪರ್ಕದ ಜನರು  ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು: 15631
ಪ್ರಯೋಗಾಲಯ ಪರೀಕ್ಷಾ ವರದಿ ವಿವರ:
ಇಲ್ಲಿಯವರೆಗೆ ಒಟ್ಟು 44244 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. • ಪಾಸಿಟಿವ್ ಪ್ರಕರಣಗಳು-3000• ನೆಗೆಟಿವ್ ವರದಿ ಬಂದ ಪ್ರಕರಣಗಳು-40767• ವರದಿ ನಿರೀಕ್ಷಿತ ಪ್ರಕರಣಗಳು-477. ಮೃತಪಟ್ಟ ಪ್ರಕರಣಗಳು-48
ದಾಖಲಿರುವ ಪ್ರಕರಣಗಳು:
 ಕೋವಿಡ್ ಆಸ್ಪತ್ರೆ :99ಕೋವಿಡ್ ಕೇರ್ ಸೆಂಟರ್ :68ಹೋಂ ಐಸೋಲೇಶನ್ :339
ಇತರೆ ವಿಷಯಗಳು: 
ಕೊಡಗು ಜಿಲ್ಲೆಯಲ್ಲಿ ಈ ದಿನ ಹೊಸದಾಗಿ  121  ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಈ ದಿನ  70 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.  ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ  21 ಪ್ರದೇಶವನ್ನು  ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. 
ಕೊಡಗು ಜಿಲ್ಲೆಯಲ್ಲಿ ಈ ದಿನ ಕೋವಿಡ್ ಸೋಂಕಿನಿಂದ 03 ಸಾವು ವರದಿಯಾಗಿದ್ದು, ವಿವರ ಕೆಳಕಂಡಂತಿದೆ. 
ಮಡಿಕೇರಿ ನಗರದ ಪ್ರಧಾನ ಅಂಚೆ ಕಚೇರಿ ವಸತಿ ಗೃಹ ನಿವಾಸಿ 53 ವರ್ಷದ ಪುರುಷ , ಮಂಗಳಾದೇವಿ ನಗರ ನಿವಾಸಿ 58 ವರ್ಷದ ಪುರುಷ ಮತ್ತು ಹಾಸನ ಜಿಲ್ಲೆಯ ಕೊಣನೂರು ನಿವಾಸಿ, ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ಪುರುಷ ರೊಬ್ಬರು ಮೃತರಾಗಿರುತ್ತಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ:48 ಕ್ಕೇರಿದೆ. 
ಈ ದಿನ 59 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತವೆ. 
ಘೋಷ್ವಾರೆ
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ:3000ಆಸ್ಪತ್ರೆಯಿಂದ ಬಿಡುಗಡೆಗೊಂಡ ಪ್ರಕರಣಗಳ ಸಂಖ್ಯೆ:2446ಮೃತರ ಸಂಖ್ಯೆ: 48ಸಕ್ರಿಯ ಪ್ರಕರಣಗಳ ಸಂಖ್ಯೆ:  506ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ: 455