ಅ.6 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೊಡಗು ಭೇಟಿ

October 3, 2020

ಮಡಿಕೇರಿ ಅ.3 : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಅ.6 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿರ್ವಹಣೆ ಸಂಬಂಧ ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯಗಳ ಪರಿವೀಕ್ಷಣೆ ಮತ್ತು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲೆಯ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ನಾಗೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.