ಕರ್ನಾಟಕದ ಎಷ್ಟು ಪೊಲೀಸರು ಕೋವಿಡ್ ನಿಂದ ಮೃತರಾಗಿದ್ದಾರೆ ಗೊತ್ತಾ !

October 3, 2020

ಮಡಿಕೇರಿ ಅ.3 : ಕೊರೊನಾ ಸಂದರ್ಭ ಪೊಲೀಸ್ ಇಲಾಖೆ ಫ್ರಂಟ್ ಲೈನ್ ವಾರಿಯರ್ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ 8 ಸಾವಿರ ಮಂದಿ ಪೊಲೀಸರು ಕೋವಿಡ್‍ಗೆ ತುತ್ತಾಗಿದ್ದು, ಇಂದು 1500 ಪೊಲೀಸರು ಕೊರೊನಾ ಸೋಂಕಿತರಾಗಿದ್ದಾರೆ. ಒಟ್ಟು 73 ಪೊಲೀಸ್ ಸಿಬ್ಬಂದಿಗಳು ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ ಎಂದು ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಕೊರೊನಾ ಸೋಂಕಿತ ಪೆÇಲೀಸರಿಗೆ ಮಾನಸಿಕ ಸ್ಥೈರ್ಯ ತುಂಬಲು ತಾವು ರಾಜ್ಯವ್ಯಾಪಿಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದೂ ಹೇಳಿದರು.
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಕಡಿಮೆ ಇದೆ. ಜಿಲ್ಲಾಡಳಿತ ಮತ್ತು ಇಲ್ಲಿನ ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರವೀಣ್ ಸೂದ್ ಹೇಳಿದರು. ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಪೆÇಲೀಸರು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಉತ್ತಮ ರೀತಿಯಲ್ಲಿ ರಕ್ಷಣಾ ಕಾರ್ಯ ನಿರ್ವಹಿಸಿದ್ದಾರೆ. ಕಳೆದ 2 ವರ್ಷಗಳಿಗೆ ಹೋಲಿಸಿದರೆ, ಈ ಬಾರಿ ಜಿಲ್ಲೆಯಲ್ಲಿ ವಿಕೋಪ ಘಟಿಸಿದ್ದರೂ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಮಹಾ ನಿರ್ದೇಶಕರಾದ ಪ್ರವೀಣ್ ಸೂದ್ ಹೇಳಿದರು.
ಕೊಡಗಿನ ಪೆÇಲೀಸರ ವಸತಿ ಗೃಹಗಳು ಮಳೆಗೆ ಸೋರುತ್ತಿರುವ ಬಗ್ಗೆ ಹಾಗೂ ವಾಹನಗಳ ದುರಸ್ತಿ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಸುದ್ದಿಗೋಷ್ಟಿಯಲ್ಲಿ ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ವಿಪುಲ್ ಕುಮಾರ್ ಹಾಗೂ ಕೊಡಗು ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿ ಕ್ಷಮಾಮಿಶ್ರ ಉಪಸ್ಥಿತರಿದ್ದರು.

error: Content is protected !!