ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3115

October 4, 2020

ಮಡಿಕೇರಿ ಅ.4 : ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 8 ಗಂಟೆ ವೇಳೆಗೆ 115 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
62 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 53 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 33 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಆರ್.ಟಿ.ಪಿ.ಸಿ.ಆರ್ ಮತ್ತು 25 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 63 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 47 ಆರ್.ಟಿ.ಪಿ.ಸಿ ಆರ್ ಮೂಲಕ ಮತ್ತು 16 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 16 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 11 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3115 ಆಗಿದ್ದು, 2446 ಮಂದಿ ಗುಣಮುಖರಾಗಿದ್ದಾರೆ. 621 ಸಕ್ರಿಯ ಪ್ರಕರಣಗಳಿದ್ದು, 48 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 490 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.