ಉಪಟಳ ನೀಡುತ್ತಿದ್ದ ಕಾಡಾನೆ ಸೆರೆ : ದೇವರಪುರದಲ್ಲಿ ಕಾರ್ಯಾಚರಣೆ ಯಶಸ್ವಿ
04/10/2020

ಮಡಿಕೇರಿ ಅ.4 : ಗೋಣಿಕೊಪ್ಪ ಸಮೀಪದ ಹೊಸೂರು ಕಳತ್ಮಾಡು ವ್ಯಾಪ್ತಿಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಪುಂಡಾನೆಯನ್ನು ದೇವರಪುರ ಬಳಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಬೆಳಗ್ಗಿನಿಂದ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ತಂಡ ದೇವರಪುರದ ಕಾಫಿ ತೋಟವೊಂದರಲ್ಲಿ ಕಾಡಾನೆಯನ್ನು ಸೆರೆ ಹಿಡಿಯಿತು. ನಾಲ್ಕು ಸಾಕಾನೆಗಳ ಸಹಕಾರದಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಸೆರೆಯಾದ ಪುಂಡಾನೆಯನ್ನು ಬಂಡೀಪುರಕ್ಕೆ ಸ್ಥಳಾಂತರಿಸಲಾಗಿದೆ.