ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3163ಕ್ಕೆ ಏರಿಕೆ

October 5, 2020

ಮಡಿಕೇರಿ ಅ.5 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 48 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
17 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 31 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 17 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಆರ್.ಟಿ.ಪಿ.ಸಿ.ಆರ್ ಮತ್ತು 13 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 21 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಆರ್.ಟಿ.ಪಿ.ಸಿ ಆರ್ ಮೂಲಕ ಮತ್ತು 10 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 8 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3163 ಆಗಿದ್ದು, 2493 ಮಂದಿ ಗುಣಮುಖರಾಗಿದ್ದಾರೆ. 622 ಸಕ್ರಿಯ ಪ್ರಕರಣಗಳಿದ್ದು, 48 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 475 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.