ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ

05/10/2020

ಹತ್ರಾಸ್ ಅ.5 : ಸಾಮೂಹಿಕ ಅತ್ಯಾಚಾರದಿಂದ 19 ವರ್ಷದ ಯುವತಿ ಮೃತಪಟ್ಟಿರುವ ಪ್ರಕರಣವನ್ನು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕು ಎಂದು ಸಂತ್ರಸ್ತೆಯ ಸಹೋದರ ಒತ್ತಾಯಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿದರು.
ಸಂತ್ರಸ್ಥೆಯ ತಂದೆಯ ಆರೋಗ್ಯ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಎಸ್ ಐಟಿಯ ಮನವಿ ಮೇರೆಗೆ ವೈದ್ಯಕೀಯ ತಂಡವೊಂದು ಇಂದು ಬೆಳಗ್ಗೆ ಸಂತ್ರಸ್ಥೆಯ ನಿವಾಸಕ್ಕೆ ಭೇಟಿ ನೀಡಿತು. ಹತ್ಯೆ ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದ್ದು, ಸಂತ್ರಸ್ಥೆಯ ಕುಟುಂಬ ಸದಸ್ಯರ ಹೇಳಿಕೆಯನ್ನು ದಾಖಲು ಮಾಡಿಕೊಂಡಿದೆ.
ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಿಫಾರಸು ಮಾಡಿದ್ದು, ಎಸ್ ಪಿ ವಿನೀತ್ ಜೈಸ್ವಾಲ್ ಕೂಡಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.