25 ಕೋಟಿ ಮಂದಿಗೆ ಕೊರೋನಾ ಲಸಿಕೆ

05/10/2020

ನವದೆಹಲಿ ಅ.5 : 2021 ರ ಜುಲೈ ವೇಳೆಗೆ ಭಾರತದ 25 ಕೋಟಿ ಮಂದಿಗೆ ಕೊರೋನಾ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ಅ.04 ರಂದು ಸಾಮಾಜಿಕ ಜಾಲತಾಣದ ಮೂಲಕ ಸಂಡೇ ಸಂವಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಕೇಂದ್ರ ಸಚಿವರು, ಕೋವಿಡ್-19 ಗೆ ಸಂಬಂಧಿಸಿದಂತೆ ಮುನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿಗಳಿಗೆ ಪ್ರಥಮ ಆದ್ಯತೆಯಾಗಿ ಕೋವಿಡ್-19 ಲಸಿಕೆಗಳನ್ನು ನೀಡಲಾಗುತ್ತದೆ. ಈ ವಿಭಾಗದ ಆದ್ಯತೆಯ ನಾಗರಿಕರಿಗೆ ಕೋವಿಡ್-19 ಲಸಿಕೆ ಅಕ್ಟೋಬರ್ ಅಂತ್ಯದ ವೇಳೆಗೆ ಲಭ್ಯವಾಗಲಿದೆ ಎಂದು ಡಾ. ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ
ಇನ್ನು ಸರ್ಕಾರ 2021 ರ ಜುಲೈ ವೇಳೆಗೆ 130 ಕೋಟಿ ಭಾರತೀಯರ ಪೈಕಿ 25 ಕೋಟಿ ಭಾರತೀಯರಿಗೆ ಕೋವಿಡ್-19 ಲಸಿಕೆಯನ್ನು ನೀಡುವ ಗುರಿ ಹೊಂದಿದೆ ಇದಕ್ಕಾಗಿ 400-500 ಡೋಸ್ ಲಸಿಕೆ ಸರ್ಕಾರ ಪಡೆದುಕೊಳ್ಳುತ್ತಿದೆ ಎಂದು ಹರ್ಷವರ್ಧನ್ ತಿಳಿಸಿದ್ದಾರೆ.