ದಿ.ಡಿ.ಕೆ.ರವಿ ಪತ್ನಿ ಕಾಂಗ್ರೆಸ್ ಸೇರ್ಪಡೆ

05/10/2020

ಬೆಂಗಳೂರು ಅ.5 : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಐಎಎಸ್ ಅಧಿಕಾರಿ ದಿ.ಡಿ.ಕೆ.ರವಿ ಅವರ ಪತ್ನಿ ಎಚ್.ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆದರದಿಂದ ಬರಮಾಡಿಕೊಂಡರು. ಬಳಿಕ ಕುಸುಮಾ ಅವರು ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವ ಸಂಬಂಧ ಸದಸ್ಯತ್ವ ಅರ್ಜಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ನಿಡೀದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್ ಮೊದಲಾದ ನಾಯಕರು ಈ ಸಂದರ್ಭ ಹಾಜರಿದ್ದರು.
ಸಧ್ಯದಲ್ಲೇ ಬೆಂಗಳೂರು ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.