ಕಿರುಗೂರು ಬಿಜೆಪಿ ಶಕ್ತಿ ಕೇಂದ್ರದ ನೂತನ ಕಚೇರಿ ಉದ್ಘಾಟನೆ : ಕೃಷಿ ಮಸೂದೆ ಬಗ್ಗೆ ಜನಜಾಗೃತಿ ಮೂಡಿಸಲು ಕೆಜಿಬಿ ಕರೆ

05/10/2020

ಮಡಿಕೇರಿ ಅ.5 : ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಮತ್ತು ಎಪಿಎಂಸಿ ಕಾಯ್ದೆಯು ರೈತರು ಹಾಗೂ ಬೆಳೆಗಾರರ ಅಭ್ಯುದಯಕ್ಕೆ ಪೂರಕವಾಗಿದ್ದು, ಈ ಬಗ್ಗೆ ಜನ ಜಾಗೃತಿ ಮೂಡಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕೆಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದ್ದಾರೆ.
ಕಿರುಗೂರು ಬಿಜೆಪಿ ಶಕ್ತಿ ಕೇಂದ್ರದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಮಸೂದೆಗಳು ಕೃಷಿಕರಿಗೆ ಹೆಚ್ಚು ಲಾಭದಾಯಕವಾಗಿದೆ ಎಂದರು.
ಸಧ್ಯದಲ್ಲೇ ಗ್ರಾ.ಪಂ ಚುನಾವಣೆ ನಡೆಯಲಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಹೆಚ್ಚು ಶ್ರಮ ಪಡುವ ಮೂಲಕ ಜಿಲ್ಲೆಯ ಎಲ್ಲಾ ಗ್ರಾ.ಪಂ ಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು, ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.
ಕಿರುಗೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಚುನಾವಣೆಯಲ್ಲೂ ಬಿಜೆಪಿಗೆ ಅತೀ ಹೆಚ್ಚು ಮತಗಳು ಲಭ್ಯವಾಗುತ್ತಿದ್ದು, ಇಲ್ಲಿನ ಜನರ ಸಹಕಾರ ಶ್ಲಾಘನೀಯವೆಂದು ಬೋಪಯ್ಯ ಹೇಳಿದರು.
ಕಿರುಗೂರು ಬಿಜೆಪಿ ಶಕ್ತಿ ಕೇಂದ್ರದ ಅಧಕ್ಷ ಚೆಪ್ಪುಡಿರ ವಿವೇಕ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ಮಾಲ್ಚಿರ ಕವಿತಾ ಬೋಜಪ್ಪ, ವಿರಾಜಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಕಿರುಗೂರು ಬಿಜೆಪಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಪೊನ್ನಂಪೇಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಲೆಮಾಡ ಸುಧೀರ್, ಕಿರುಗೂರು ಕೃಷಿ ಮೋರ್ಚಾದ ಅಧ್ಯಕ್ಷ ಚೆಪ್ಪುಡಿರ ರಾಕೇಶ್ ದೇವಯ್ಯ, ಪ್ರಮುಖರಾದ ಪೆಮ್ಮಂಡ ವಿಶ್ವನಾಥ್, ಚಿರಿಯಪಂಡ ಕೀರ್ತನ್, ಪುತ್ತಮನೆ ಜೀವನ್, ಕಾಕಮಾಡ ಆದರ್ಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನವೀನ್ ನಿರೂಪಿಸಿದರು.