ಮಾಸ್ಕ್ ಧರಿಸದಿದ್ದರೆ 500 ರೂ. ದಂಡ : ಮಡಿಕೇರಿ ನಗರಸಭೆ ಎಚ್ಚರಿಕೆ

06/10/2020

ಮಡಿಕೇರಿ ಅ.5 : ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸರ್ಕಾರದ ನಿರ್ದೇಶನದಂತೆ ನಗರಸಭೆ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳು ಸೇರಿದಂತೆ ಮಾಸ್ಕ್ ಧರಿಸದೆ ಇರುವವರು ಮತ್ತು ಓಡಾಡುವುದು ಕಂಡುಬಂದಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ ಎಂದು ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ತಿಳಿಸಿದ್ದಾರೆ.
ನಗರಸಭೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೆ ಇರುವವರು ಮತ್ತು ಓಡಾಡುವುದು ಕಂಡುಬಂದಲ್ಲಿ ಸ್ಥಳದಲ್ಲಿಯೇ ದಂಡ ವಸೂಲಿ ಮಾಡುವ ಪ್ರಕ್ರಿಯೆ ಅ.5 ರಿಂದ ಆರಂಭವಾಗಿದೆ. ಮಾಸ್ಕ್‍ನ್ನು ಕಡ್ಡಾಯವಾಗಿ ಬಳಸುವುದು ಮತ್ತು ಒಬ್ಬರಿಂದ ಮತ್ತೊಬ್ಬರು ಅಂತರ ಕಾಯ್ದುಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಕೋರಿದ್ದಾರೆ.