ಕೊಡಗಿನಲ್ಲಿ ಒಂದೇ ದಿನ 104 ಕೋವಿಡ್ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 3363ಕ್ಕೆ ಏರಿಕೆ

October 7, 2020

ಮಡಿಕೇರಿ ಅ. 7 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 104 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
74 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 30 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 29 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 15 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 48 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 43 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 5 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 24 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 10 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3363 ಆಗಿದ್ದು, 2627 ಮಂದಿ ಗುಣಮುಖರಾಗಿದ್ದಾರೆ. 736 ಸಕ್ರಿಯ ಪ್ರಕರಣಗಳಿದ್ದು, 49 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 549 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!