ಹತ್ರಾಸ್ ಪ್ರಕರಣ : ಸುಪ್ರೀಂಕೋರ್ಟ್ ನಿರ್ದೇಶನ

October 7, 2020

ನವದೆಹಲಿ ಅ.6 : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಗಾಯಗಳಿಂದಾಗಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯನ್ನು ರಕ್ಷಿಸಲು ಕೈಗೊಂಡ ಕ್ರಮಗಳ ಕುರಿತು ಗುರುವಾರದೊಳಗೆ ತಿಳಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ನಿರ್ದೇಶಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ,ರಾಜಕೀಯ ಉದ್ದೇಶಗಳೊಂದಿಗೆ ಈ ಪ್ರಕರಣದ ಬಗ್ಗೆ ಅಪ ಪ್ರಚಾರ ನಡೆಯುತ್ತಿದ್ದು, ಸಿಬಿಐ ತನಿಖೆಗೆ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಒಲವು ವ್ಯಕ್ತಪಡಿಸಿದ ನಂತರ ಸುಪ್ರೀಂಕೋರ್ಟ್ ಈ ರೀತಿಯ ತೀರ್ಪು ಸೂಚನೆ ನೀಡಿದೆ.
ಈ ಘಟನೆಯನ್ನು ಭಯಾನಕ ಮತ್ತು ಅಸಾಧಾರಣ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯ ಪೀಠ, ಪ್ರಕರಣದ ತನಿಖೆ ಸುಗಮವಾಗಿ ನಡೆಯಲಿದೆ ಎಂದು ಭರವಸೆ ನೀಡಿತು.
ಉತ್ತರ ಪ್ರದೇಶ ಸರ್ಕಾರದ ಪರ ನ್ಯಾಯಾಲಯದಲ್ಲಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹತ್ರಾಸ್ ಪ್ರಕರಣದ ಬಗ್ಗೆ ಹರಡುತ್ತಿರುವ ಅಪ ಪ್ರಚಾರಗಳನ್ನು ನಿಲ್ಲಿಸಬೇಕಾಗಿದೆ. ಯಾವುದೇ ಪಟಭದ್ರ ಹಿತಾಸಕ್ತಿಗಳು ನಕಲಿಯನ್ನು ಸೃಷ್ಟಿಸದಂತೆ ಸಿಬಿಐ ತನಿಖೆ ನಡೆಯಲಿದೆ ಎಂದು ನ್ಯಾಯಾಲಯಕ್ಕೆ ಹೇಳಿದರು.

error: Content is protected !!