ಮುತ್ತಪ್ಪ ರೈ ಮನೆ ಮೇಲೆ ಸಿಸಿಬಿ ದಾಳಿ

07/10/2020

ಬೆಂಗಳೂರು ಅ.7 : ಇತ್ತೀಚೆಗೆ ನಿಧನರಾದ ಮಾಜಿ ಡಾನ್ ಮುತ್ತಪ್ಪ ರೈ ಅವರ ಮನೆಗೆ ಸಿಸಿಬಿ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿದ್ದಾರೆ.
ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್ ಜಾಲದ ನಂಟು ಹೊಂದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಸಂಪೂರ್ಣ ಮಾಹಿತಿ ಕಲೆ ಹಾಕಿರುವ ಸಿಸಿಬಿ ಪೆÇಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಇಂದು ಬೆಳಿಗ್ಗೆ ಎರಡೂ ಮನೆಗಳಿಗೆ ದಾಳಿ ಮಾಡಲಾಗಿದೆ.
ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ.
ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ ಪೆಡ್ಲರ್ಸ್ ರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮನಗರ ಬಿಡದಿಯ ಮನೆಯಲ್ಲಿ ಸಿಸಿಬಿ ಶೋಧ ಕಾರ್ಯ ನಡೆಸುತ್ತಿದೆ. ಎಸಿಬಿ ವೇಣುಗೋಪಾಲ್ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.