ಐಪಿಎಲ್ ಬೆಟ್ಟಿಂಗ್ : ನಾಲ್ವರ ಬಂಧನ

07/10/2020

ಬೆಂಗಳೂರು ಅ.6 : ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರನ್ನು ಕೇಂದ್ರ ಅಪರಾಧ ವಿಭಾಗದ ಪೆÇಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.
ಬೆಟ್ಟಿಂಗ್ ಆ್ಯಂಪ್’ಗಳನ್ನು ಬಳಸಿಕೊಂಡೇ ಸಿಸಿಬಿ ಪೆÇಲೀಸರು ನಗರದ ಪುಟ್ಟೇನಹಳ್ಳಿ, ಕೋಣನಕುಂಟೆ ಮತ್ತು ಬ್ಯಾಟರಾಯನಪುರ ಮೂರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದು ನಾಲ್ವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಅಪರಾಧ ವಿಭಾಗದ ಜಂಟಿ ಪೆÇಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಹೇಳಿದ್ದಾರೆ.
ಬಂಧಿತ ಆರೋಪಿಗಳಿಂದ ರೂ.4,91,510 ನಗದು, 6 ಮೊಬೈಲ್ ಫೆÇೀನ್’ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸೆಪ್ಟೆಂಬರ್ 19 ರಿಂದ ಐಪಿಎಲ್ 2020 ಆರಂಭವಾಗಿದ್ದು, ನವೆಂಬರ್ 10ರವರೆಗೂ ನಡೆಯಲಿದೆ. ಯುಎಇ – ಅಬುಧಾಬಿ, ಶಾರ್ಜಾ ಮತ್ತು ದುಬೈನಲ್ಲಿ ಪಂದ್ಯಗಳು ನಡೆಯುತ್ತಿವೆ.