ಸಾಹಿತ್ಯ ಅಕಾಡೆಮಿಯ ಕಮ್ಮಟಗಳಿಗೆ ಅರ್ಜಿ ಆಹ್ವಾನ

October 7, 2020

ಮಡಿಕೇರಿ ಅ. 7 : ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕೊರೊನಾ ಲಾಕ್‍ಡೌನ್ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ರಾಜ್ಯ ಮಟ್ಟದ ಮೂರು ದಿನಗಳ ಕಥಾ ಕಮ್ಮಟ, ಲಲಿತ ಪ್ರಬಂಧ ಕಮ್ಮಟ, ವಿಜ್ಞಾನ ಸಾಹಿತ್ಯ ಕಮ್ಮಟ ಹಾಗೂ ಸಾಹಿತ್ಯ ಮತ್ತು ಸಾಮಾಜಿಕ ಜಾಲತಾಣ ಕಮ್ಮಟ ಸೇರಿ ಒಟ್ಟು ನಾಲ್ಕು ಕಮ್ಮಟಗಳನ್ನು ನಡೆಸಲು ಉದ್ದೇಶಿಸಿದ್ದು, ಈ ನಾಲ್ಕು ಕಮ್ಮಟಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯಿರುವ 20 ರಿಂದ 45 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್, 20 ಕೊನೆಯ ದಿನವಾಗಿದೆ. ಪ್ರತಿ ವಿಭಾಗದ ಕಮ್ಮಟಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org ನಿಂದ ಅರ್ಜಿ ನಮೂನೆ ಹಾಗೂ ವಿವರಗಲನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ಕರಿಯಪ್ಪ ಅವರು ತಿಳಿಸಿದ್ದಾರೆ.