ಜೆಡಿಎಸ್ ಸಭೆ : ಪಕ್ಷದ ಗೆಲುವಿಗೆ ಶ್ರಮಿಸಿ : ಅಧ್ಯಕ್ಷ ಕೆ.ಎಂ.ಗಣೇಶ್ ಕರೆ

07/10/2020

ಮಡಿಕೇರಿ ಅ.7 : ಸಧ್ಯದಲ್ಲಿಯೇ ಗ್ರಾ.ಪಂ ಮತ್ತು ಮಡಿಕೇರಿ ನಗರಸಭೆ ಚುನಾವಣೆ ನಡೆಯಲಿದ್ದು, ಜಾತ್ಯಾತೀತ ಜನತಾದಳ ಪಕ್ಷದ ಗೆಲುವಿಗೆ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಕರೆ ನೀಡಿದ್ದಾರೆ.
ಜಿಲ್ಲಾ ಜೆಡಿಎಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಎಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆಗೆ ಮುಂದಾಗಬೇಕೆಂದು ತಿಳಿಸಿದರು. ಪ್ರತಿ ಗ್ರಾ.ಪಂ ಮಟ್ಟದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗಾಗಿ ಈಗಿನಿಂದಲೇ ಕಾರ್ಯೋನ್ಮುಖರಾಗುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಮುಂಬರುವ ಗ್ರಾ.ಪಂ ಚುನಾವಣೆಗೆ ಪಕ್ಷದ ಉಸ್ತುವಾರಿಯನ್ನು ಆಯಾ ಘಟಕದ ಅಧ್ಯಕ್ಷರಿಗೆ ನೀಡಲಾಯಿತು. ತಾಲ್ಲೂಕು ಅಧ್ಯಕ್ಷರ ಕಾರ್ಯಚಟುವಟಿಕೆ ಬಗ್ಗೆ ವಿವರಿಸಲಾಯಿತು.
ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್ ಖಾನ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಅದಿಲ್ ಪಾಷಾ, ಯುವ ಜೆಡಿಎಸ್ ಅಧ್ಯಕ್ಷ ವಿಶ್ವ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಪಾಣತ್ತಲೆ ವಿಶ್ವನಾಥ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ರಾಜ್ಯ ಹಿರಿಯ ಉಪಾಧ್ಯಕ್ಷ ಯಾಲದಾಳು ಮನೋಜ್ ಬೋಪಯ್ಯ, ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಲ್ಲಚಂಡ ಗೌತಮ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ನಾಗರಾಜ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಎನ್.ಸಿ.ಸುನಿಲ್, ಮಹಿಳಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಆರ್.ಆರ್.ರುಬೀನಾ, ಜಿಲ್ಲಾ ಉಪಾಧ್ಯಕ್ಷ ಶಿವದಾಸ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ಗಣೇಶ್, ಕಾರ್ಯಕಾರಿ ಸಮಿತಿ ಸದಸ್ಯ ಸುಕೇಶ್ ಚಂಗಪ್ಪ, ಹಿರಿಯ ಮುಖಂಡ ಶಬೀರ್, ಹಿರಿಯ ಉಪಾಧ್ಯಕ್ಷ ಬೋಜಪ್ಪ, ಪಾಪಣ್ಣ, ರಾಮಚಂದ್ರ, ಕುಶಾಲನಗರ ಅಲ್ಪಸಂಖ್ಯಾತ ತಾಲ್ಲೂಕು ಅಧ್ಯಕ್ಷ ಈ.ಕೆ.ಅಬ್ದುಲ್, ಯುವ ಪ್ರಧಾನ ಕಾರ್ಯದರ್ಶಿ ಜಾಶೀರ್, ಸಾಮಾಜಿಕ ಜಾಲತಾಣ ಸಂಚಾಲಕ ಸೈಫ್, ಸಾಧಿಕ್, ನಗರ ಎಸ್.ಸಿ ಘಟಕದ ಅಧ್ಯಕ್ಷ ರವಿಕುಮಾರ್, ಮಡಿಕೇರಿ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಬಶೀರ್, ನಗರ ಘಟಕದ ಅಧ್ಯಕ್ಷ ಖಲೀಲ್, ವಿರಾಜಪೇಟೆ ಅಧ್ಯಕ್ಷ ಮಜೀದ್ ಚೋಕಂಡಲ್ಲಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.