ವಿಶೇಷ ಚೇತನರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

07/10/2020

ಮಡಿಕೇರಿ ಅ.7 : ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ 2020ನೇ ಸಾಲಿನಲ್ಲೂ ಸಹ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಅಕ್ಟೋಬರ್, 15 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್.ಸಂಪತ್ ಕುಮಾರ್ ಅವರು ತಿಳಿಸಿದ್ದಾರೆ.