ಸೋಮವಾರಪೇಟೆ ವಾರದ ಸಂತೆ ಆರ್‍ಎಂಸಿಗೆ ಸ್ಥಳಾಂತರ

07/10/2020

ಮಡಿಕೇರಿ ಅ. 7 : ಸೋಮವಾರಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯವರ ಆದೇಶದ ಮೇರೆಗೆ ಸೋಮವಾರಪೇಟೆ ಪಟ್ಟಣದ ವಾರದ ಸಂತೆಯನ್ನು ಮುಂದಿನ ಆದೇಶದವರೆಗೆ ಆರ್.ಎಂ.ಸಿ.ಗೆ ಸ್ಥಳಾಂತರಿಸಲಾಗಿದೆ ಎಂದು ಪ.ಪಂ.ಮುಖ್ಯಾಧಿಕಾರಿ ನಾಚಪ್ಪ ಅವರು ತಿಳಿಸಿದ್ದಾರೆ.
ಆದ್ದರಿಂದ ವ್ಯಾಪಾರಸ್ಥರು ಪಟ್ಟಣದ ಮಾರುಕಟ್ಟೆ ಹಾಗೂ ಇತರ ಯಾವುದೇ ಬೀದಿಗಳಲ್ಲಿ ವ್ಯಾಪಾರ ಮಾಡದೆ ಆರ್‍ಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವುದು. ತಪ್ಪಿದ್ದಲ್ಲಿ ಕಾನೂನು ರೀತ್ಯಾ ಕ್ರಮ ವಹಿಸಲಾಗುವುದು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.