ಅ.13 ರಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ವಿಚಾರ ಸಂಕಿರಣ

October 7, 2020

ಮಡಿಕೇರಿ ಸೆ. 7 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮಹಿಳೆಯರ ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮವು ಅಕ್ಟೋಬರ್, 13 ರಂದು ನಗರದ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್‍ನ ಅಧ್ಯಕ್ಷರಾದ ಬಾಚರಣಿಯಂಡ ರಾಣು ಅಪ್ಪಣ್ಣ ಅವರು ಭಾಗವಹಿಸಲಿದ್ದಾರೆ.
ನಂತರ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಚಿ.ನಾ.ಸೋಮೇಶ್ ಇವರು ‘ಸಮಾಜತ್‍ರ ಅಭಿವೃದ್ಧಿಲ್ ಪೊಮ್ಮಕ್ಕಡ ಪಾತ್ರ’ ಹಾಗೂ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷರಾದ ಕನ್ನಂಡ ಕವಿತಾ ಬೊಳ್ಯಪ್ಪ ಅವರು ‘ಕೊಡವ ಸಂಸ್ಕøತಿ ಉಳ್‍ತಿ-ಬೊಳ್‍ತ್‍ವ ನ್‍ಟ್ಟ್‍ಲ್ ಪೊಮ್ಮಕ್ಕಡ ಪಾತ್ರ’ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆಯನ್ನು ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕ ಮತ್ತು ಸಿ.ಡಿ.ಗಳ ಪ್ರದರ್ಶನ ಮತ್ತು ಮಾರಾಟ ಇರುತ್ತದೆ.