ಅರೆಭಾಷೆ ಸಾಹಿತ್ಯ, ಸಂಸ್ಕೃತಿಯ ಬೆಳವಣಿಗೆಗೆ ಕೈಜೋಡಿಸಿ : ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಕರೆ

07/10/2020

ಮಡಿಕೇರಿ ಸೆ.7 : ಅರೆಭಾಷೆಯು ತನ್ನದೇ ಆದ ಸಾಹಿತ್ಯ ಪರಂಪರೆ ಹೊಂದಿದೆ. ಇದರೊಂದಿಗೆ ವಿಶಿಷ್ಟ ಮತ್ತು ವಿಭಿನ್ನ ಸಂಸ್ಕೃತಿ ಒಳಗೊಂಡಿದೆ. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯುಭಾಷೆ ಸಂಸ್ಕೃತಿ, ಜನಾಂಗದ ಸಾಂಸ್ಕ್ಕೃತಿಕ ಮತ್ತು ಬೌದ್ಧಿಕ ಏಳಿಗೆಗಾಗಿ ಮತ್ತ ಶ್ರಮಿಸಬೇಕು ಎಂದು ಕೇಂದ್ರ ಸಚಿವರು ಸಲಹೆ ಮಾಡಿದರು.
ಇತ್ತೀಚೆಗೆ ಪುತ್ತೂರಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಮತ್ತು ಪೂರ್ಣ ಸಮಿತಿಯ ಸದಸ್ಯರು ಸಚಿವರನ್ನು ಭೇಟಿ ಮಾಡಿ ಅಕಾಡೆಮಿಯ ಕಾರ್ಯರೂಪ ಮತ್ತು ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು.
ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯು ಉತ್ತಮವಾಗಿ ಕಾರ್ಯಕ್ರಮ ರೂಪಿಸುತ್ತಿದ್ದು, ಮತ್ತು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ ನಡೆಸುವಂತಾಗಲಿ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಸದಾನಂದ ಗೌಡ ಅವರು ತಿಳಿಸಿದ್ದಾರೆ.
ಇದೇ ವೇಳೆ ಅಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಅಕಾಡೆಮಿಯು ಕಳೆದ ವರ್ಷ ನಡೆಸಿದ ಕಾರ್ಯಚಟುವಟಿಕೆ ಮತ್ತು ಮುಂದಿನ ವರ್ಷ ದಲ್ಲಿ ನಡೆಸಲಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು.
ಮಾಹಿತಿ ಪಡೆದು ಮಾತನಾಡಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ ಅವರು, ಅಕಾಡೆಮಿಯ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅರೆಭಾಷೆ ಅಕಾಡಮಿಯ ಎಲ್ಲಾ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರವಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಅಕಾಡಮಿಯು ರೂಪಿಸಿರುವ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರು ಹಲವು ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರು ಅರೆಭಾಷೆ ಸಂಸ್ಕೃತಿಯು ವಿಶಿ?ವಾದ ಭಾಷೆ ಪರಂಪರೆ ಹೊಂದಿದ್ದು, ಅರೆಭಾಷೆಯನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವಲ್ಲಿ ಕಾರ್ಯಕ್ರಮ ರೂಪಿಸುವಂತೆ ಸಲಹೆ ಮಾಡಿದರು. ಜೊತೆಗೆ ಅರೆಭಾಷೆ ಅಕಾಡಮಿಯ ಕಾರ್ಯ ಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಸಚಿವರು ಅರೆಭಾಷೆ ಅಕಾಡಮಿಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ಅಧ್ಯಕ್ಷರು ಮತ್ತು ಸದಸ್ಯರಿಂದ ಅಭಿಪ್ರಾಯ ಪಡೆದರು.
ಅಕಾಡೆಮಿ ಸದಸ್ಯರಾದ ಬೈತಡ್ಕ ಜಾನಕಿ, ಸ್ಮಿತಾ ಅಮೃತರಾಜ್, ಪ್ರೇಮಾ ರಾಘವಯ್ಯ, ಡಾ.ವಿಶ್ವನಾಥ ಬದಿಕಾನ, ಡಾ.ಪುರು?ತ್ತಮ ಕೆ.ವಿ., ಕೆ.ವಿ.ಧನಂಜಯ ಅಗೋಳಿಕಜೆ, ಕುಸುಮಾಧರ ಎ.ಟಿ, ಪುರು?ತ್ತಮ ಕಿರ್ಲಾಯ, ಜಯಪ್ರಕಾಶ್ ಮೋಂಟಡ್ಕ, ಕಿರಣ್ ಕುಂಬಳಚೇರಿ ಇತರರು ಹಲವು ಮಾಹಿತಿ ನೀಡಿದರು.