ಮಾಸ್ಕ್ ದಂಡ ಶುಲ್ಕ ಇಳಿಕೆ

08/10/2020

ಬೆಂಗಳೂರು ಅ.8 : ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ಧ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ಮೇಲೆ ಹಾಕಲಾಗುತ್ತಿದ್ದ ದಂಡ ಶುಲ್ಕವನ್ನು ಇಳಿಕೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.
ತಕ್ಷಣದಿಂದ ಜಾರಿಗೆ ಬರುವಂತೆ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡ ವಿಧಿಸಲು ತಿಳಿಸಲಾಗಿದೆ.
ಈ ಮೊದಲು ಮಾಸ್ಕ್ ಧರಿಸದವರ ವಿರುದ್ಧ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 500ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ದುಬಾರಿ ದಂಡಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.