ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರು ಬಲಿ

08/10/2020

ಶ್ರೀನಗರ ಅ.8 : ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್‍ನಲ್ಲಿ ಮಂಗಳವಾರ ಭಯೋತ್ಪಾದಕರ ಶೋಧ ಕಾರ್ಯಾಚರಣೆ ವೇಳೆ ನಡೆದ ಎನ್‍ಕೌಂಟರ್‍ನಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಬುಧವಾರ ಹತ್ಯೆ ಮಾಡಿವೆ ಎಂದು ಪೆÇಲೀಸ್ ವಕ್ತಾರರು ತಿಳಿಸಿದ್ದಾರೆ.
ಏತನ್ಮಧ್ಯೆ, ವದಂತಿಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಅಂತರ್ಜಾಲ ಸೇವೆಯನ್ನು ಶೋಪಿಯಾನ್ ಜಿಲ್ಲೆಯಲ್ಲಿ ಸ್ಥಗಿತಗೊಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೆÇಲೀಸರ ವಿಶೇಷ ಕಾರ್ಯಾಚರಣೆ ಗುಂಪು(ಎಸ್‍ಒಜಿ), ರಾಷ್ಟ್ರೀಯ ರೈಫಲ್ಸ್ (ಆರ್‍ಆರ್) ಮತ್ತು ಸಿಆರ್‍ಪಿಎಫ್ ಜಂಟಿ ಶೋಧ ಕಾರ್ಯಾಚರಣೆಯನ್ನು ಶೋಪಿಯಾನ್‍ನ ಸಜ್ಜಾದ್ ಮೊಹಲ್ಲಾ ಸುಗನ್ ಜೈನ್‍ಪೆÇೀರಾದಲ್ಲಿ ಮಂಗಳವಾರ ಸಂಜೆಯಿಂದ ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ.
ಎಲ್ಲಾ ನಿರ್ಗಮನ ಸ್ಥಳಗಳನ್ನು ಮೊಹರು ಮಾಡಿದ ನಂತರ ಭದ್ರತಾ ಪಡೆಗಳು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿರುವಾಗ, ಅಲ್ಲಿ ಅಡಗಿಕೊಂಡಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ವಿವೇಚನೆಯಿಲ್ಲದೆ ಗುಂಡು ಹಾರಿಸಿದರು. ಈ ವೇಳೆ ಭದ್ರತಾ ಪಡೆಗಳು ತಿರುಗೇಟು ನೀಡಿದವು.