ಡಿ.ಕೆ.ರವಿ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿ

08/10/2020

ಬೆಂಗಳೂರು ಅ.8 : ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆರ್.ಆರ್ ನಗರಕ್ಕೆ ಡಿ.ಕೆ.ರವಿ ಪತ್ನಿ ಎಚ್.ಕುಸುಮಾ ಮತ್ತು ಶಿರಾ ಕ್ಷೇತ್ರಕ್ಕೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ಹೆಸರನ್ನು ಆಯ್ಕೆ ಮಾಡಿ ಎಐಸಿಸಿ ಪ್ರಕಟಿಸಿದೆ.

ಎಐಸಿಸಿ ಚುನಾವಣಾ ಸಮಿತಿ ಕುಸುಮಾ ಅವರ ಹೆಸರನ್ನು ಅಧಿಕೃತವಾಗಿ ಆಯ್ಕೆ ಮಾಡಿದೆ. ಕೆಲ ದಿನಗಳ ಹಿಂದಷ್ಟೇ ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು. ಮುನಿರತ್ನ ಅವರ ರಾಜೀನಾಮೆ ಬಳಿಕ ತೆರವಾಗಿದ್ದ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಅವರ ಹೆಸರನ್ನು ಘೋಷಿಸಲಾಗಿದೆ.
ನವೆಂಬರ್ 3 ರಂದು ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.