Rambo ಗೆ ಕೊಡಗು ಪೊಲೀಸರಿಂದ ಅಂತಿಮ ನಮನ

October 8, 2020

ಮಡಿಕೇರಿ ಅ. 8 : ಕೊಡಗು ಜಿಲ್ಲಾ ಶ್ವಾನದಳದಲ್ಲಿ ಕಳೆದ 6 ವರ್ಷಗಳಿಂದ ಸ್ಫೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ  ‘Rambo’ ಹೆಸರಿನ ಶ್ವಾನವು ಅನಾರೋಗ್ಯದಿಂದ ಮೃತಪಟ್ಟಿದೆ. ಜಿಲ್ಲಾ ಸಶಸ್ತ್ರದಳದ ಆವರಣದಲ್ಲಿ ಶ್ವಾನದ ಪಾರ್ಥಿವ ಶರೀರಕ್ಕೆ ಇಲಾಖೆ ಅಧಿಕಾರಿಗಳಿಂದ ಪುಷ್ಪಗುಚ್ಛವನ್ನು ಇರಿಸಿ ಇಲಾಖಾ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಇಲಾಖೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಈ ಶ್ವಾನವು ಕಳೆದ 6 ವರ್ಷಗಳಲ್ಲಿ ಜಿಲ್ಲೆಯ ಹಾಗು ಹೊರಜಿಲ್ಲೆಗಳಲ್ಲಿ ನಡೆದ ವಿವಿಧ ಬಂದೋಬಸ್ತ್ ಕರ್ತವ್ಯಗಳ ಸಂದರ್ಭದಲ್ಲಿ 400 ಹೆಚ್ಚು ಸ್ಫೋಟಕ ತಪಾಸಣೆ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿರುತ್ತದೆ.