ಕೊಡಗಿನಲ್ಲಿ 95 ಹೊಸ ಪ್ರಕರಣ ಪತ್ತೆ : ಸೋಂಕಿತರ ಸಂಖ್ಯೆ 3458ಕ್ಕೆ ಏರಿಕೆ

October 8, 2020

ಮಡಿಕೇರಿ ಅ.8 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 95 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
43 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 52 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 41 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 27 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 32 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 22 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 10 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 20 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 7 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 13 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3458 ಆಗಿದ್ದು, 2674 ಮಂದಿ ಗುಣಮುಖರಾಗಿದ್ದಾರೆ. 734 ಸಕ್ರಿಯ ಪ್ರಕರಣಗಳಿದ್ದು, 50 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 554 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!