ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿ ಗುರುಸ್ವಾಮಿ ಅಧಿಕಾರ ಸ್ವೀಕಾರ

October 8, 2020

ಮಡಿಕೇರಿ ಸೆ.08 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ(ಪ್ರಭಾರ) ಜಿ.ಎಸ್.ಗುರುಸ್ವಾಮಿ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಗುರುಸ್ವಾಮಿ ಅವರು ಕೊಡಗು ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ಗುರುಸ್ವಾಮಿ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಹಲವು ತಿಂಗಳುಗಳ ಕಾಲ ಸಹಾಯಕ ನಿರ್ದೇಶಕರಾಗಿ (ಪ್ರಭಾರ) ಕಾರ್ಯ ನಿರ್ವಹಿಸಿದ್ದಾರೆ.

error: Content is protected !!