ಉದ್ಯಮಶೀಲತೆ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

08/10/2020

ಮಡಿಕೇರಿ ಅ. 8 : ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಿಡಾಕ್ ವತಿಯಿಂದ 2020-21 ನೇ ಸಾಲಿಗೆ ಹಣ್ಣು ಮತ್ತು ತರಕಾರಿಗಳಿಂದ ತಯಾರಿಸುವ ಉಪ ಉತ್ಪನ್ನಗಳ ಬಗ್ಗೆ ಇಡಿಪಿ (ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ) ವನ್ನು ನವೆಂಬರ್ ತಿಂಗಳ ಮೊದಲನೇ ವಾರದಲ್ಲಿ ಮಡಿಕೇರಿ ಜಿಲ್ಲಾ ಕೈಗಾರಿಕಾ ಕೆಂದ್ರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ತರಬೇತಿಗೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಸಿಡಾಕ್ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಕೊಹಿನೂರು ರಸ್ತೆ, ಮಡಿಕೇರಿ ಇಲ್ಲಿ ಅಕ್ಟೋಬರ್, 20 ರ ಒಳಗೆ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 6364826966 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಎಂ.ಮಂಜುನಾಥ ಸ್ವಾಮಿ ಅವರು ತಿಳಿಸಿದ್ದಾರೆ.