ಕೊಡಗಿನಲ್ಲಿ 81 ಕೋವಿಡ್ ಪ್ರಕರಣ ಪತ್ತೆ

October 9, 2020

ಮಡಿಕೇರಿ ಅ. 9 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 81 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
58 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 23 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 36 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 22 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 14 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 33 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 27 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 6 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3539 ಆಗಿದ್ದು, 2775 ಮಂದಿ ಗುಣಮುಖರಾಗಿದ್ದಾರೆ. 714
ಸಕ್ರಿಯ ಪ್ರಕರಣಗಳಿದ್ದು, 50 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 581 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.