ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಸೂಚನೆ

09/10/2020

ಬೆಂಗಳೂರು ಅ.9 : ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದನ್ನು ಸಲ್ಲಿಸಿ ಅನುಮತಿ ಪಡೆಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಗುರುತಿಸಲಾಗಿರುವ ಪ್ರವಾಸೋದ್ಯಮ ಕೇಂದ್ರಗಳ ಸಮಗ್ರ ಅಭಿವೃಧ್ಧಿಗೆ ಇರುವ ತೊಡಕುಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳಲು ಅನುಮತಿ ನೀಡಿದರು.
ಈ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಯೊಂದಿಗೆ ಪ್ರಸ್ತಾವನೆಯನ್ನು ಮಂಡಿಸಲು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು. ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿರುವ ಜಿಲ್ಲೆಗಳನ್ನು ಗುರುತಿಸಿ ಅಧಿಕಾರಿಗಳನ್ನು ನಿಯೋಜಿಸುವಂತೆ ಇಲಾಖಾ ಸಚಿವ ಸಿ.ಟಿ.ರವಿ ಮುಖ್ಯಮಂತ್ರಿಗಳನ್ನು ಕೋರಿದರು. ಜಿಲ್ಲೆಗಳಲ್ಲಿ ಅಧಿಕಾರಿಗಳಿಲ್ಲದೆ ಪ್ರಗತಿ ಪರಿಶೀಲನೆ ಅಸಾಧ್ಯವಾಗಿದೆ ಎಂಬ ಅಂಶವನ್ನು ಅವರು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.