ಅಭಿವ್ಯಕ್ತಿ ಸ್ವಾತಂತ್ರ್ಯ ದುರುಪಯೋಗ

October 9, 2020

ನವದೆಹಲಿ ಅ.9 : ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುವುದು ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ದುರುಪಯೋಗವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ತಬ್ಲಿಘಿಗಳಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿ ಹೇಳಿದ್ದು, ತಬ್ಲಿಘಿ ಜಮಾತ್ ನ ಕಾರ್ಯಕ್ರಮದ ಕುರಿತು ಮಾಧ್ಯಮಗಳ ವರದಿಯ ಕುರಿತು ತಪ್ಪಿಸಿಕೊಳ್ಳುವ ಹಾಗೂ ನಿರ್ಲಜ್ಜ ಪ್ರಮಾಣಪತ್ರವನ್ನು ಸಲ್ಲಿಸಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೋಬ್ಡೆ ಅವರಿದ್ದ ಪೀಠ, ಜಮೈತ್ ಉಲಾಮ-ಎ-ಹಿಂದ್ ಹಾಗೂ ಇತರರು ಮಾಧ್ಯಮಗಳಲ್ಲಿ ತಬ್ಲಿಘಿ ಜಮಾತ್ ನ ಸಭೆಯ ಕುರಿತ ಕಾರ್ಯಕ್ರಮಗಳ ಮೂಲಕ ಕೋಮುದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ಕೋರ್ಟ್ ಪ್ರತಿಕ್ರಿಯೆ ನೀಡಿ ಇತ್ತೀಚಿನ ದಿನಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯವನ್ನು ಅತಿ ಹೆಚ್ಚು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ.