ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
09/10/2020

ಮಡಿಕೇರಿ ಅ. 9 : -ಪ್ರಸಕ್ತ 2020-21ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಉತ್ತಿರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಇಲಾಖಾ ವೆಬ್ ಸೈಟ್ www.sw.kar.nic.in ನಲ್ಲಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‍ನಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಹಾಗೂ ಅರ್ಜಿ ನಮೂನೆ, ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.