ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 3652ಕ್ಕೆ ಏರಿಕೆ

October 10, 2020

ಮಡಿಕೇರಿ ಅ. 10 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 113 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
77 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 36 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 57 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 41 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 16 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 28 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 23 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 5 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 25 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 12 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 13 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3652 ಆಗಿದ್ದು, 2886 ಮಂದಿ ಗುಣಮುಖರಾಗಿದ್ದಾರೆ. 713
ಸಕ್ರಿಯ ಪ್ರಕರಣಗಳಿದ್ದು, 53 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 604 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.