ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

October 10, 2020

ಬೆಂಗಳೂರು ಅ.10 : ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಶುಕ್ರವಾರ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಹಗುರ, ಕರಾವಳಿ ವಲಯದಲ್ಲಿ ಸಾಧಾರಣಾ ಮಳೆ ಬೀಳುವ ಸಂಭವವಿರುವುದಾಗಿ ಹೇಳಿದೆ.
ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ ರೀತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಯಾದಗಿರಿ, ಬೀದರ್ , ಕಲಬುರಗಿ, ವಿಜಯಪುರ, ಹಾವೇರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವ್ಯಾಪಕ ರೀತಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಲಾಗಿದೆ.

error: Content is protected !!