ವಿದ್ಯಾಗಮ’ ಯೋಜನೆ ಯಶಸ್ವಿಯಾಗಿದೆ

10/10/2020

ಬೆಂಗಳೂರು ಅ.9 : ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ ಎಂಬ ಕುರಿತಾದ ವರದಿಯೊಂದಿಗೆ ಶಾಲಾ ಮಕ್ಕಳಿಗೆ ಸುರಕ್ಷಿತ ಕ್ರಮಗಳೊಂದಿಗೆ ಕಲಿಕೆಯನ್ನು ಮುಂದುವರೆಸುವವಿದ್ಯಾಗಮ’ ಯೋಜನೆಯ ವೈಫಲ್ಯವೆಂಬಂತೆ ಬಿಂಬಿಸಿರುವುದು ವಿಷಾದನೀಯ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಶಾಲೆ ಮುಚ್ಚಿರುವ ಸಮಯದಲ್ಲಿಯೂ ಮಕ್ಕಳ ನಿರಂತರ ಕಲಿಕೆ, ಪ್ರತಿ ಮಗುವೂ ಕಲಿಕಾ ವ್ಯಾಪ್ತಿಯಲ್ಲಿ ಬರುವಂತಹ ಯೋಜನೆ ಇದಾಗಿದ್ದು, ವಿದ್ಯಾಗಮ ಯೋಜನೆ ಪರಿಪೂರ್ಣ-ಸುರಕ್ಷಿತವಾಗಿದೆ ಎಂದು ಸಚಿವರು ಹೇಳಿದ್ದಾರೆ.
ಈ ಯೋಜನೆ ನಿರ್ವಹಿಸುವ ಎಲ್ಲ ಶಿಕ್ಷಕರು, ಮಕ್ಕಳನ್ನು ಕಲಿಕಾ ಚಟುವಟಿಕೆಗಳಲ್ಲಿ ಯಾವ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಮಾಹಿತಿ, ತರಬೇತಿಯನ್ನು ಪಡೆದಿದ್ದಾರೆ ಎಂದು ಸುರೇಶ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.