ಶಾಲೆ ಆರಂಭವಾದರೆ ಕೊರೋನಾ ಸ್ಫೋಟ

October 10, 2020

ಬೆಂಗಳೂರು ಅ.10 : ಕೊರೋನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ಯಾವುದೇ ಕಾರಣಕ್ಕೂ ತೆರೆಯಬಾರದು. ರಾಜ್ಯದ ಎಲ್ಲಾ ಮಕ್ಕಳಿಗೂ ಆನ್‍ಲೈನ್ ತರಗತಿಗಳನ್ನು ಪ್ರಾರಂಭಿಸುವುದು ಈಗಿನ ಪರಿಸ್ಥಿತಿಯಲ್ಲಿ ಅತ್ಯಗತ್ಯ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಈ ಸಂಬಂಧ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಶಾಲೆಗಳನ್ನು ಆರಂಭಿಸಿದರೆ ಕೊರೋನಾ ಸೋಂಕು ಸ್ಫೋಟಗೊಂಡು ಸುನಾಮಿ ಸ್ವರೂಪದ ಸಾವು ನೋವುಗಳನ್ನು ಸಮಾಜ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಈಗಾಗಲೇ ಅಮೆರಿಕಾ ಮತ್ತು ಯುರೋಪಿನ ಕೆಲವು ದೇಶಗಳು ಶಾಲೆಗಳನ್ನು ತೆರೆದು ಸಮಸ್ಯೆಗಳನ್ನು ಮೈಮೇಲೆ ಹಾಕಿಕೊಂಡಿರುವ ಉದಾಹರಣೆಗಳು ಕಣ್ಣ ಮುಂದೆ ಇವೆ ಎಂದಿದ್ದಾರೆ.
ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳು ಹೆಚ್ಚುತ್ತಿವೆ ಎಂಬ ನಿಮ್ಮ ಮಾತಿನಲ್ಲಿ ಅನುಮಾನಗಳಿಲ್ಲ. ಆದರೆ ಜಿಲ್ಲಾಡಳಿತಗಳು ನಿದ್ದೆಯಿಂದ ಎಚ್ಚೆತ್ತು ಕ್ರಿಯಾಶೀಲವಾದರೆ. ಕುಟುಂಬಗಳಿಗೆ ದುಡಿಯುವ ಅವಕಾಶಗಳನ್ನು ಸರ್ಕಾರವು ಹೆಚ್ಚಿಸಿ ಅವರ ಕೈತುಂಬಾ ಹಣ ಇರುವಂತೆ ನೋಡಿಕೊಂಡರೆ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದಾಗಿದೆ ಎಂದಿದ್ದಾರೆ.

error: Content is protected !!