ಸಿಎಂ ಭೇಟಿಗೆ ಕೊರೋನಾ ಪರೀಕ್ಷೆ ಕಡ್ಡಾಯ

10/10/2020

ಬೆಂಗಳೂರು ಅ.10 : ಸಿಎಂ ಯಡಿಯೂರಪ್ಪ ಸೇರಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕೃಷ್ಣಾಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಕೊರೋನಾ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕಚೇರಿ ಬಳಿ ಬರುವ ಪ್ರತೀಯೊಬ್ಬರಿಗೂ ಇದೀಗ ಕೊರೋನಾ ಪರಿಕ್ಷೆಯನ್ನು ಕಡ್ಡಾಯವಾಗಿ ಮಾಡಲಾಗುತ್ತಿದ್ದು, ವೈದ್ಯಕೀಯ ವರದಿಯಲ್ಲಿ ಸೋಂಕು ಇಲ್ಲ ಎಂದು ದೃಢಪಟ್ಟರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.
ಇತ್ತೀಚೆಗಷ್ಟೇ ಪರೀಕ್ಷೆ ಮಾಡಿಸಿಕೊಂಡು ವರದಿ ನೆಗೆಟಿವ್ ಇದ್ದರೆ ಅಂತಹವರಿಗೆ ಮತ್ತೆ ಪರೀಕ್ಷೆ ಮಾಡಲಾಗುತ್ತಿಲ್ಲ. ಆದರೆ, ವರದಿಯನ್ನು ಕಡ್ಡಾಯವಾಗಿ ಸಾರ್ವಜನಿಕರ ಬಳಿ ಇಟ್ಟುಕೊಂಡಿರಬೇಕಾಗುತ್ತದೆ. ವರದಿ ಹಿಡಿದು ಬಾರದ ಜನರಿಗೆ ಕೃಷ್ಣಾದಲ್ಲಿಯೇ ಆ?ಯಂಟಿಜನ್ ಪರೀಕ್ಷೆ ನಡೆಸಿ 15 ನಿಮಿಷಗಲ್ಲಿ ವೈದ್ಯಕೀಯ ವರದಿಯನ್ನು ನೀಡಲಾಗುತ್ತಿದೆ.
ಮೂಗು ಮತ್ತು ಗಂಟಲಿನಿಂದ ಸ್ಯಾಂಪಲ್ಸ್ ಸಂಗ್ರಹಿಸಿದ ಬಳಿಕ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಬಳಿಕ 15 ನಿಮಿಷಗಳಲ್ಲಿ ವರದಿ ನೀಡಿ ವರದಿಯಲ್ಲಿಯಲ್ಲಿ ನೆಗೆಟಿವ್ ಇದ್ದರೆ ಮಾತ್ರ ಮುಖ್ಯಮಂತ್ರಿಗಳ ಕಚೇರಿಗೆ ತೆರಳಲು ಅನುಮತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಚೇರಿಗೆ ಭೇಟಿ ನೀಡಿ ಬಂದ ವ್ಯಕ್ತಿಯೊಬ್ಬರು ಹೇಳಿದ್ದಾರೆ.