ಕೊಡಗಿನಲ್ಲಿ ಕೋವಿಡ್ : ಸಾವಿನ ಸಂಖ್ಯೆ 54 ಕ್ಕೆ ಏರಿಕೆ

10/10/2020

ಮಡಿಕೇರಿ ಅ.10 : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 113 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 3,652 ಮಂದಿಯಲ್ಲಿ ಪಾಸಿಟಿವ್ ವರದಿ ಬಂದಿದ್ದು, 54 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಮಡಿಕೇರಿ ನಗರದ ಮುತ್ತಪ್ಪ ದೇವಸ್ಥಾನ ಬಳಿಯ ನಿವಾಸಿ 75 ವರ್ಷದ ಪುರುಷರೊಬ್ಬರು ಇಂದು ಮೃತಪಟ್ಟಿದ್ದಾರೆ.
ಒಟ್ಟು 52246 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗಿದ್ದು, 47637 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ. 957 ವರದಿಗಳನ್ನು ನಿರೀಕ್ಷಿಸಲಾಗುತ್ತಿದ್ದು, 133 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋವಿಡ್ ಕೇರ್ ಸೆಂಟರ್ ನಲ್ಲಿ 77, ಹೋಂ ಐಸೋಲೇಶನ್ ನಲ್ಲಿ 374 ಮಂದಿಯ ಮೇಲೆ ನಿಗಾ ಇರಿಸಲಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಇಂದು 59 ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ. ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ 36 ಪ್ರದೇಶವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. ಇಂದು 128 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.