ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 3862 ಕ್ಕೆ ಏರಿಕೆ

October 13, 2020

ಮಡಿಕೇರಿ ಅ.13 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3862 ಕ್ಕೆ ಏರಿಕೆಯಾಗಿದ್ದು, 3170 ಮಂದಿ ಗುಣಮುಖರಾಗಿದ್ದಾರೆ. 636 ಸಕ್ರಿಯ ಪ್ರಕರಣಗಳಿದ್ದು, 56 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 613 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 108 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
88 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 20 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 31 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 18 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 13 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 52 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 46 ಆರ್.ಟಿ.ಪಿ.ಸಿ.ಆರ್ ಮತ್ತು 6 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 19 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 19 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.