ಅ.16 ರಂದು ಮಡಿಕೇರಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ

October 13, 2020

ಮಡಿಕೇರಿ ಅ.13 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್, ರೋಟರಿ ಮಿಸ್ಟಿಹಿಲ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್, 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಡೆಯಲಿದೆ.
ವಸತಿ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವರು ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಪ್ಪಂಡೇರಂಡ ಭವ್ಯ, ತಾ.ಪಂ. ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಮೈಸೂರು ವಿಭಾಗದ ವಿಭಾಗೀಯ ಜಂಟಿ ನಿರ್ದೇಶಕರಾದ ಡಾ.ಪುಷ್ಪಲತ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಲೋಕೇಶ್, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಸಮುದಾಯ ಆರೋಗ್ಯ ಕಾರ್ಯಕ್ರಮಗಳು ಮುಖ್ಯಸ್ಥರಾದ ಡಾ.ಡೆನ್ನಿಸ್ ಚೌಹಾಣ್, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ಪಿ.ಎಂ.ಸಂದೀಪ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಎಸ್.ಗೋಪಿನಾಥ್, ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಇತರರು ಪಾಲ್ಗೊಳ್ಳಲಿದ್ದಾರೆ.