ದಂಡ ವಿಧಿಸಿ ಮಾಸ್ಕ್ ಕೂಡ ನೀಡಿದರು ಗೋಣಿಕೊಪ್ಪ ಪೊಲೀಸರು

13/10/2020


    ಮಡಿಕೇರಿ ಅ.13 : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹಾಗು ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.  ಕೋವಿಡ್-19 ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿರುತ್ತದೆ ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಆದೇಶವನ್ನು ಹೊರಡಿಸಿದೆ.  ಈ ನಿಟ್ಟಿನಲ್ಲಿ ಈ ದಿನ ಗೋಣಿಕೊಪ್ಪ ಪೊಲೀಸರು ಗೋಣಿಕೊಪ್ಪ ನಗರದಲ್ಲಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯದಿಂದ ಓಡಾಡುತ್ತಿದ್ದ ವ್ಯಕ್ತಿಗಳಿಗೆ ದಂಡ ವಿಧಿಸಿದ್ದು ಅಲ್ಲದೆ ಉಚಿತ  ಮಾಸ್ಕನ್ನೂ ಸಹ ವಿತರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಕಾರ್ಯವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದು ಈ ಕಾರ್ಯದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣೆಯ ಎಎಸ್ಐ ಮೇದಪ್ಪ ಸಿಬ್ಬಂದಿಗಳಾದ ಅವಿನಾಶ್, ದೇವೇಂದ್ರ ನಾಯಕ್ ಹಾಗು ಪುಟ್ಟರಾಜು ಪಾಲ್ಗೊಂಡಿದ್ದರು.  ಇವರ ಕಾರ್ಯವನ್ನು ಪ್ರಶಂಸಿಸಲಾಗಿದೆ.