ಶ್ರೀ ಕೋದಂಡರಾಮ ದೇವಾಲಯ ದಸರಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಆಯ್ಕೆ
14/10/2020

ಮಡಿಕೇರಿ ಅ. 14 : ದಸರಾ ದಶಮಂಟಪಗಳಲ್ಲಿ ಒಂದಾದ ಶ್ರೀ ಕೋದಂಡ ರಾಮ ದಸರಾ ಸಮಿತಿಯ ನೂತನ ಅಧ್ಯಕ್ಷರಾಗಿ ಮಹೇಶ್ ಆಯ್ಕೆಯಾಗಿದ್ದಾರೆ.
ದೇವಾಲಯದ ಸಮುದಾಯ ಭವನದಲ್ಲಿ ನಡೆದ 46ನೇ ವರ್ಷದ ದಸರಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ವಿಜಯ್ ಆಯ್ಕೆಯಾದರು.
ಸಭೆಯಲ್ಲಿ ಸರ್ಕಾರದ ನಿರ್ದೇಶನದಂತೆ ಸರಳ ಹಾಗೂ ಸಾಂಪ್ರದಾಯಿಕ ದಸರಾ ನಡೆಸಲು ತೀರ್ಮಾನಿಸಲಾಯಿತು.
