ಅತ್ಯಾಚಾರ ಪ್ರಕರಣ ಖಂಡಿಸಿ ಅಮ್ಮತ್ತಿಯಲ್ಲಿ ಸಮಾನ ಮನಸ್ಕರ ವೇದಿಕೆಯಿಂದ ಪ್ರತಿಭಟನೆ

14/10/2020

ಸಿದ್ದಾಪುರ : ಹತ್ರಾಸ್‍ನಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ, ಸಮಾನ ಮನಸ್ಕರ ವೇದಿಕೆ ಪ್ರತಿಭಟನೆ ನಡೆಸಿತು.
ಅಮ್ಮತ್ತಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ವೇದಿಕೆಯ ಕಾರ್ಯಕರ್ತರು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ದೇಶದಲ್ಲಿ ಇತ್ತೀಚಿಗೆ ನಿರಂತರವಾಗಿ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಇಡೀ ವಿಶ್ವವೇ ತಲೆತಗ್ಗಿಸುವಂಥ ಘಟನೆಯಾಗಿದ್ದು, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ಆಡಳಿತ ವೈಫಲ್ಯತೋರುತ್ತಿರುವ ಯೋಗಿ ಸರ್ಕಾರದ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಸಮಾನ ಮನಸ್ಕರ ವೇದಿಕೆಯ ಪ್ರಮುಖರಾದ ಮಹದೇವರಜನಿಕಾಂತ್ , ಅರ್ಜುನ, ಜಯಮ್ಮ, ಕೃಷ್ಣ, ಮತೀನ್ ,ದೇವರಾಜ್, ಹಂಸ, ಮೊಹಮ್ಮದ್ ಸೇರಿದಂತೆ ಮತ್ತಿತರರು ಹಾಜರಿದ್ದರು.